ಬೆಂಗಳೂರು: ಮತ್ತೆ ಯಾವುದೇ ಲಾಕ್ಡೌನ್ ಇರುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಯಾವುದೇ ಲಾಕ್ಡೌನ್ ಜಾರಿ ಮಾಡದೇ ಕೊರೋನಾ ನಿಯಂತ್ರಣಕ್ಕೆ ಎಲ್ಲಾ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಲಾಕ್ಡೌನ್ ಜಾರಿ ಮಾಡದೆ ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಆದರೆ, ಸಂಪೂರ್ಣ ಲಾಕ್ಡೌನ್ ಜಾರಿಮಾಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ಹೇಳಲಾಗಿದೆ.