ಪಟ್ಟಣಂತಿಟ್ಟ: ಕೇರಳ ಮೂಲದ ಮಾಡೆಲ್, ಆಕ್ಟಿವಿಸ್ಟ್ ರೆಹನಾ ಫಾತಿಮಾ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಶಬರಿಮಲೆ ದೇವಾಲಯಕ್ಕೆ ಪ್ರವೇಶಿಸಿ ವಿವಾದ ಎಬ್ಬಿಸಿದ್ದ ಅವರು, ಇಬ್ಬರು ಮಕ್ಕಳಿಂದ ಪೇಂಟಿಂಗ್ ಮಾಡಿಸಿಕೊಂಡಿದ್ದಾರೆ.
ದೇಹ ಮತ್ತು ರಾಜಕೀಯ ಎಂಬ ಹೆಡ್ ಲೈನ್ ಇರುವ ವಿಡಿಯೋವನ್ನು ಜಾಲತಾಣದಲ್ಲಿ ಹರಿಬಿಟ್ಟಿದ್ದು, ವಕೀಲ ಅರುಣ್ ಪ್ರಕಾಶ್ ನೀಡಿದ ದೂರಿನ ಮೇರೆಗೆ ರೆಹನಾ ಫಾತಿಮಾ ವಿರುದ್ಧ ಐಟಿ ಕಾಯ್ದೆ ಮತ್ತು ಫೋಕ್ಸೋ ಕಾಯ್ದೆಯಡಿ ಜಾಮೀನುರಹಿತ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಅವರು ಪರಾರಿಯಾಗಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಫಾತಿಮಾ ನಿವಾಸದ ಮೇಲೆ ದಾಳಿ ಮಾಡಿ ಮೊಬೈಲ್ ಮತ್ತು ಲ್ಯಾಪ್ ಟಾಪ್ ಜಪ್ತಿ ಮಾಡಿದ್ದು, ಉದ್ದೇಶಪೂರ್ವಕವಾಗಿ ಇಂತಹ ವಿಡಿಯೋ ಹರಿ ಬಿಟ್ಟಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.