alex Certify BIG NEWS: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಭರ್ಜರಿ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಭರ್ಜರಿ ‘ಗುಡ್ ನ್ಯೂಸ್’

ಬೆಂಗಳೂರು: ಕೊರೋನಾ ಸಂಕಷ್ಟದ ಸಂದರ್ಭದಲ್ಲಿಯು ಸರ್ಕಾರಿ ನೌಕರರ ವರ್ಗಾವಣೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.

ಶಾಸಕರ ಒತ್ತಡಕ್ಕೆ ಮಣಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಆದೇಶ ಹೊರಡಿಸಿದ್ದಾರೆ. ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ವರ್ಗಾವಣೆಗೆ ಬ್ರೇಕ್ ಹಾಕಲಾಗಿತ್ತು. ಶೇಕಡ 6ರಷ್ಟು ವರ್ಗಾವಣೆಗೆ ಅನುಮತಿ ನೀಡಲಾಗಿದೆ.

ಶಾಸಕರ ಒತ್ತಡಕ್ಕೆ ಮಣಿದ ಸಿಎಂ ಶೇಕಡ 6 ರಷ್ಟು ವರ್ಗಾವಣೆಗೆ ನಿರ್ಧರಿಸಿದ್ದಾರೆ. ಬಿ ಮತ್ತು ಸಿ ವೃಂದದ ಅಧಿಕಾರಿ ಹಾಗೂ ನೌಕರರಲ್ಲಿ ಶೇಕಡ 6 ರಷ್ಟು ನೌಕರರನ್ನು ಜುಲೈ 10ರೊಳಗೆ ವರ್ಗಾವಣೆ ಮಾಡುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದ್ದು, ಆಯಾ ಇಲಾಖೆಗಳ ಸಚಿವರಿಗೆ ಅಧಿಕಾರ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...