ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ರಗ್ಗಿನಲ ಸಮೀಪದ ನದಿಗೆ ಕಾರು ಬಿದ್ದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಶುಕ್ರವಾರ ದಾರುಣವಾಗಿ ಮೃತಪಟ್ಟಿದ್ದಾರೆ.
ಗೂಲ್ ದಿಂದ ಥತ್ರಿಯತ್ತ ಇವರು ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ನಿಯಂತ್ರಣ ಕಳೆದುಕೊಂಡ ಕಾರು 300 ಅಡಿ ಆಳದ ಕಂದಕಕ್ಕೆ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಅವರೆಲ್ಲರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಲ್ಲಿನ ರಸ್ತೆಗಳಲ್ಲಿ ಕ್ರಾಶ್ ಬ್ಯಾರಿಯರ್ಸ್ ಅನ್ನು ಹಾಕಲಾಗಿದ್ದರೂ ಅತಿಯಾದ ವೇಗವಿದ್ದ ಕಾರಣ ದುರಂತ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯರಿಂದ ವಿಷಯ ತಿಳಿಯುತ್ತಿದ್ದಂತೆ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ. ಅಲ್ಲದೆ, ಇದು ಅಪಾಯಕಾರಿ ಪ್ರದೇಶವಾಗಿದ್ದು, ಆಗಾಗ ಅಪಘಾತಗಳು ನಡೆಯುತ್ತಲೇ ಇರುತ್ತವೆ. ಇದಕ್ಕಾಗಿ ಶಾಶ್ವತ ಪರಿಹಾರ ರೂಪಿಸಬೇಕಿದೆ ಎಂಬ ಆಗ್ರಹ ವ್ಯಕ್ತವಾಗಿದೆ.