ಬೆಂಗಳೂರು: ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮದಿಂದ ರಾಜ್ಯದ ಹಲವೆಡೆ ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ, ಉತ್ತರ, ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಳ್ಳಾರಿ, ಬೀದರ್, ಧಾರವಾಡ, ಗದಗ, ರಾಯಚೂರು, ಕಲಬುರ್ಗಿ, ಕೊಪ್ಪಳ, ಶಿವಮೊಗ್ಗ, ಕೋಲಾರ, ತುಮಕೂರು, ಕೊಡಗು ಭಾಗದಲ್ಲಿ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಪ್ರದೇಶದಲ್ಲಿ ಜುಲೈ 2ರಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಹುತೇಕ ಜಿಲ್ಲೆಗಳಲ್ಲಿ ಜೂನ್ 29 ರ ಇಂದಿನಿಂದ ಭಾರೀ ಮಳೆಯಾಗಲಿದೆ ಎಂದು ಹೇಳಲಾಗಿದೆ.