ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಕೈ ಮೀರಿ ಹೋಗುತ್ತಿದೆ. ಹೀಗಾಗಿ ಜುಲೈ 31 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.
ಅನಿವಾರ್ಯವಾಗಿ ಲಾಕ್ಡೌನ್ ಜಾರಿ ಮಾಡಲಾಗಿದ್ದು, ಜುಲೈ 31 ರವರೆಗೆ ಆದೇಶಗಳನ್ನು ಪಾಲಿಸುವಂತೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಜನತೆಗೆ ಮನವಿ ಮಾಡಿದ್ದಾರೆ. ಅಗತ್ಯ ವಸ್ತು, ಸೇವೆ ಹೊರತುಪಡಿಸಿ ಅನಗತ್ಯ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ.
ಅನಗತ್ಯವಾಗಿ ಜನ ಸಂಚಾರಕ್ಕೆ ನಿರ್ಬಂಧವಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.