ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಗೋಡೆಕೆರೆ ಗೊಲ್ಲರಹಟ್ಟಿಯಲ್ಲಿ ಕುರಿಗಾಯಿಯೊಬ್ಬರು ಕೊರೊನಾ ಸೋಂಕಿಗೆ ತುತ್ತಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಲ್ಲದೆ ಆತ ಮೇಯಿಸುತ್ತಿದ್ದ 40 ಕುರಿಗಳನ್ನು ಪ್ರತ್ಯೇಕವಾಗಿ ಕ್ವಾರಂಟೈನ್ ನಲ್ಲಿ ಇರಿಸಲಾಗಿದ್ದು, ಅವುಗಳ ಗಂಟಲು ದ್ರವ ಸಂಗ್ರಹಿಸಿ ಭೂಪಾಲ್ ನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಪ್ರಯೋಗಾಲಯದ ವರದಿ ಬಂದ ಬಳಿಕ ಕ್ವಾರಂಟೈನ್ ನಲ್ಲಿರುವ ಕುರಿಗಳನ್ನು ಗುಂಪಿನಲ್ಲಿ ಮೇಯಲು ಬಿಡಬೇಕೇ ಅಥವಾ ಪ್ರತ್ಯೇಕವಾಗಿರಿಸಬೇಕೇ ಎಂಬುದರ ಕುರಿತು ಜಿಲ್ಲಾಡಳಿತ ತೀರ್ಮಾನಿಸಲಿದೆ.