ರಾಜ್ಯದಲ್ಲಿ ಕೊರೊನಾ ಉಲ್ಬಣಿಸುತ್ತಿರುವ ಕಾರಣ ಈ ಬಾರಿ ಸಾರ್ವತ್ರಿಕ ವರ್ಗಾವಣೆ ಮಾಡಲಾಗುವುದಿಲ್ಲ ಎಂದು ಹೇಳಿದ್ದ ಸರ್ಕಾರ, ಬಳಿಕ ತನ್ನ ನಿರ್ಧಾರವನ್ನು ಹಿಂತೆಗೆದುಕೊಂಡಿತ್ತು. ಹೀಗಾಗಿ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಮಹತ್ವದ ಸುದ್ದಿಯೊಂದು ಇಲ್ಲಿದೆ.
ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ನಡೆಸದಂತೆ ಕೋರಿ ವಕೀಲರೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಮಾನ್ಯ ಮಾಡಲು ನಿರಾಕರಿಸಿದ್ದು, ಹೀಗಾಗಿ ವರ್ಗಾವಣೆ ಪ್ರಕ್ರಿಯೆ ನಿಗದಿಯಂತೆ ನಡೆಯಲಿದೆ.
ವರ್ಗಾವಣೆ ವಿಚಾರದಲ್ಲಿ ನ್ಯಾಯಾಲಯ ನೇರವಾಗಿ ಮಧ್ಯ ಪ್ರವೇಶಿಸುವುದಿಲ್ಲ ಎಂದು ಹೇಳಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ, ಒಂದೊಮ್ಮೆ ವರ್ಗಾವಣೆಯಿಂದ ಅಧಿಕಾರಿಗಳು ಬಾಧಿತರಾದರೆ ಅಂಥವರು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದ ಮೊರೆ ಹೋಗಲು ಅವರುಗಳಿಗೆ ಮುಕ್ತ ಅವಕಾಶವಿರುತ್ತದೆ ಎಂದು ತಿಳಿಸಿದೆ.