ಬೆಂಗಳೂರು: ರಾಜ್ಯ ಸರ್ಕಾರ ಅಗಸ/ಕ್ಷೌರಿಕ ವೃತ್ತಿಯ ಅಸಂಘಟಿತ ಕಾರ್ಮಿಕರಿಗೆ ಕೋವೀಡ್ ಲಾಕ್‍ಡೌನ್ ಹಿನ್ನೆಲೆ. 5000 ರೂ. ಪರಿಹಾರ ಘೋಷಣೆ ಮಾಡಿದ್ದು, ಈ ಪರಿಹಾರವನ್ನು ಪಡೆಯಲು ಸೇವಾ ಸಿಂಧು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಜೂನ್ 30 ರಂದು ಕಡೆಯ ದಿನವೆಂದು ನಿಗದಿಪಡಿಸಲಾಗಿತ್ತು.
ಇದೀಗ ಈ ಅವಧಿಯನ್ನು ಜುಲೈ 10 ರವರೆಗೆ ವಿಸ್ತರಿಸಲಾಗಿದ್ದು, ಫಲಾನುಭವಿಗಳು ಇದರ ಸದುಪಯೋಗ ಪಡೆಯಬೇಕೆಂದು ಹೇಳಲಾಗಿದೆ. ಈಗಾಗಲೇ ಅನೇಕರು ಅರ್ಜಿ ಸಲ್ಲಿಸಿದ್ದು, ಇನ್ನೂ ಹೆಚ್ಚಿನ ಜನರಿಗೆ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಹೇಳಲಾಗಿದೆ.