ಪ್ರಧಾನಿ ನರೇಂದ್ರ ಮೋದಿಯವರು ಇಂದು ದೇಶವನ್ನುದ್ದೇಶಿಸಿ ಮಾತನಾಡಿದ್ದು, ಈ ಸಂದರ್ಭದಲ್ಲಿ ಬಡ ಜನತೆಗೆ ಅನುಕೂಲವಾಗುವಂತೆ ನವೆಂಬರ್ ಅಂತ್ಯದವರೆಗೆ ಉಚಿತ ಪಡಿತರ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ ವಿಸ್ತರಿಸಿರುವ ಕಾರಣ 80 ಕೋಟಿ ಜನತೆಗೆ ಐದು ತಿಂಗಳವರೆಗೆ ಉಚಿತವಾಗಿ ಪಡಿತರ ಸಿಗಲಿದೆ. ಹೀಗಾಗಿ ಪಡಿತರ ಚೀಟಿ ಹೊಂದಿರುವ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಅಥವಾ ಗೋಧಿ ಹಾಗೂ ಪ್ರತಿ ಕುಟುಂಬಕ್ಕೆ 1 ಕೆಜಿ ಬೇಳೆ ಕಾಳು ನೀಡಲಾಗುತ್ತದೆ.
ಆಷಾಡದ ಬಳಿಕ ಬರಲಿರುವ ಶ್ರಾವಣದ ನಂತರ ಸಾಲು ಸಾಲು ಹಬ್ಬಗಳು ಬರಲಿದ್ದು, ಹೀಗಾಗಿ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.