ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಮೂವರು ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭ ‘ಪ್ರತಿಜ್ಞಾ’ ಡಿಜಿಟಲ್ ಕಾರ್ಯಕ್ರಮ ಇಂದು ಬೆಳಿಗ್ಗೆ 10.30 ರಿಂದ ಆರಂಭವಾಗಲಿದೆ.
ರಾಜ್ಯದ 7800 ಕಡೆಗಳಲ್ಲಿ ಲೈವ್ ಪ್ರಸಾರ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಇರುತ್ತದೆ. ಕಾಂಗ್ರೆಸ್ ಪಕ್ಷದಲ್ಲಿ ಹೊಸ ಹುಮ್ಮಸ್ಸು ತಂದಿರುವ ಡಿ.ಕೆ. ಶಿವಕುಮಾರ್ ಪದಗ್ರಹಣ ಸಮಾರಂಭ ತಂತ್ರಜ್ಞಾನ ಬಳಸಿಕೊಂಡು ಅದ್ದೂರಿಯಾಗಿ ಆಯೋಜಿಸಲಾಗಿದೆ.
ಲೈವ್ ಪ್ರಸಾರದಲ್ಲಿ ಎಲ್ಲಾ ಬ್ಲಾಕ್, ಪಂಚಾಯಿತಿ, ವಾರ್ಡ್ ಮಟ್ಟ ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ವೀಕ್ಷಣೆಗೆ ಬೃಹತ್ ಪರದೆಗಳನ್ನು ವ್ಯವಸ್ಥೆ ಮಾಡಲಾಲಾಗಿದೆ. ಮಾರ್ಚ್ 11 ರಂದು ಡಿ.ಕೆ. ಶಿವಕುಮಾರ್ ಅಧ್ಯಕ್ಷರಾಗಿ ನೇಮಕವಾಗಿದ್ದರೂ, ಕೊರೋನಾ ಕಾರಣದಿಂದ ಪದಗ್ರಹಣ ಸಮಾರಂಭ ಮುಂದೂಡಿಕೆಯಾಗಿತ್ತು.
ಕಾಂಗ್ರೆಸ್ನಲ್ಲಿ ಹಬ್ಬದ ವಾತಾವರಣ ಉಂಟಾಗಿದೆ. 3 ಜನ ಕಾರ್ಯಾಧ್ಯಕ್ಷರೊಂದಿಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಳ್ಳಲಿದ್ದು ಪಕ್ಷದ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ. ಉಳಿದಂತೆ ರಾಜ್ಯದ 7800 ಕಡೆಗಳಲ್ಲಿ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ.