ಕೊರೊನಾ ಮಹಾಮಾರಿಯಿಂದ ಯಾವಾಗ ಮುಕ್ತಿಯಾಗುತ್ತೇವೋ. ಇದಕ್ಕೆ ಲಸಿಕೆ ಯಾವಾಗ ಸಿಗುತ್ತದೆಯೋ ಎಂಬಂತಾಗಿದೆ. ದಿನದಿಂದ ದಿನಕ್ಕೆ ಕೊರೊನಾ ವೈರಸ್ ತನ್ನ ಆರ್ಭಟವನ್ನು ಹೆಚ್ಚು ಮಾಡುತ್ತಲೇ ಇದೆ. ನಟಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿದ್ದು, ಈ ನಟಿ ಸ್ವಯಂ ನಿರ್ಬಂಧಕ್ಕೆ ಒಳಗಾಗಿದ್ದಾರೆ.
ಹೌದು, ಕಿರುತೆರೆ ನಟಿ ಅದಿತಿ ಗುಪ್ತಾ ಅವರಿಗೆ ಕೊರೊನಾ ಪಾಸಿಟಿವ್ ಆಗಿದೆ. ಈ ನಟಿಗೆ ಯಾವುದೇ ರೋಗ ಲಕ್ಷಣಗಳು ಇರಲಿಲ್ಲವಂತೆ. ಆದರೆ ವಾಸನೆ ಪ್ರಜ್ಞೆಯನ್ನು ಕಳೆದುಕೊಂಡಿದ್ದರಂತೆ. ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಇರುವುದು ಗೊತ್ತಾಗಿದೆ.
ಇನ್ನು ಪಾಸಿಟಿವ್ ಎಂದು ಗೊತ್ತಾದ ಬಳಿಕ ತಮಗೆ ತಾವೇ ನಿರ್ಬಂಧ ಹೇರಿಕೊಂಡಿದ್ದಾರೆ. ಹಾಗೂ ಮುಂದಿನ 10 ದಿನಗಳವರೆಗೆ ಮನೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿರುತ್ತೇನೆ ಎಂದು ಈ ನಟಿ ಹೇಳಿಕೊಂಡಿದ್ದಾರೆ. ವೈದ್ಯರ ಸಲಹೆ ಮೇರೆಗೆ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದಾಗಿ ಹೇಳಿಕೊಂಡಿದ್ದಾರೆ.