ಪ್ರತಿ ವರ್ಷ ರಸ್ತೆ ಅಪಘಾತದಲ್ಲಿ ಸುಮಾರು ಒಂದೂವರೆ ಲಕ್ಷ ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಾರೆ ಹಾಗೂ ಮೂರು ಲಕ್ಷಕ್ಕೂ ಅಧಿಕ ಮಂದಿ ಕೈ ಕಾಲು ಕಳೆದುಕೊಳ್ಳುತ್ತಿದ್ದಾರೆ. ಇಂತವರಿಗೊಂದು ಮಹತ್ವದ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಯೋಜನೆ ರೂಪಿಸಿದೆ.
ಹೌದು, ಶೀಘ್ರದಲ್ಲಿಯೇ ನಗದು ರಹಿತ ಚಿಕಿತ್ಸಾ ಸೌಲಭ್ಯ ಆರಂಭಿಸಲು ಸರ್ಕಾರ ಮುಂದಾಗಿದೆ. ನಗದು ರಹಿತ ಚಿಕಿತ್ಸೆಗಾಗಿ ಮೋಟಾರು ವಾಹನ ಅಪಘಾತ ನಿಧಿಯನ್ನು ರಚನೆ ಮಾಡಲಾಗುತ್ತದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತಿಳಿಸಿದೆ.
ರಸ್ತೆ ಅಪಘಾತಕ್ಕೆ ಒಳಗಾದವರಿಗೆ ಆಘಾತ ಮತ್ತು ಆರೋಗ್ಯ ಸೇವೆಗಳಿಗೆ ಬ್ಯಾಂಕ್ ಖಾತೆಯ ಮೂಲಕ ಹಣಕಾಸು ಸಹಾಯ ಮಾಡಲಾಗುತ್ತದೆ. ಈ ಯೋಜನೆಯಡಿಯಲ್ಲಿ ಗರಿಷ್ಟ 2.5 ಲಕ್ಷ ರೂಪಾಯಿ ಚಿಕಿತ್ಸೆ ಪಡೆಯಬಹುದಾಗಿದೆ. ಇದನ್ನು ಎಂಓಆರ್‌ಟಿಹೆಚ್ ಅಡಿಯಲ್ಲಿ ಅನುಷ್ಠಾನ ಮಾಡಲಾಗುವುದು ಎಂದು ತಿಳಿಸಿದೆ.