ಬೆಂಗಳೂರು: ರಾಜ್ಯ ಸರ್ಕಾರ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರ ವೇತನವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಎಂಬಿಬಿಎಸ್ ವೈದ್ಯರ ವೇತನವನ್ನು 45 ಸಾವಿರ ರೂ.ನಿಂದ 60 ಸಾವಿರ ರೂ.ಗೆ ಹೆಚ್ಚಳ ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಜಿಲ್ಲೆ, ತಾಲೂಕು ಮತ್ತು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂಬಿಬಿಎಸ್ ವೈದ್ಯರ ವೇತನ ಹೆಚ್ಚಳ ಮಾಡಲಾಗಿದೆ.
ವೇತನ ಪರಿಷ್ಕರಣೆ ವೈದ್ಯರ ಸೇವೆಯನ್ನು ಸಕ್ರಮಗೊಳಿಸುವ ಬೇಡಿಕೆಗೆ ಆಸ್ಪದ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಅಲ್ಲದೇ, ಗ್ರಾಮಾಂತರ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಮೆರಿಟ್ ಮತ್ತು ರೋಸ್ಟರ್ ಅನುಸರಿಸಿ ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಿಸಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಅನುಮತಿ ನೀಡಲಾಗಿದೆ.