ತುಮಕೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲಾ, ಕಾಲೇಜುಗಳನ್ನು ಆರಂಭಿಸದಿರಲು ಸರ್ಕಾರ ಮುಂದಾಗಿದೆ. ಆಗಸ್ಟ್ ನಂತರವೇ ಶಾಲಾ-ಕಾಲೇಜುಗಳನ್ನು ಹಂತಹಂತವಾಗಿ ಆರಂಭಿಸಲಾಗುವುದು ಎನ್ನಲಾಗಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ ಈ ಕುರಿತು ಮಾತನಾಡಿ, ಆಗಸ್ಟ್ ನಂತರವೇ ಶಾಲಾ-ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಮೊದಲಿಗೆ ಪದವಿ ಪೂರ್ವ ಕಾಲೇಜು, ಪ್ರೌಢ ಶಾಲೆಗಳನ್ನು ಆರಂಭ ಮಾಡಲಾಗುವುದು. ನಂತರದಲ್ಲಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.