ಕೊರೊನಾ ಸೋಂಕು ಹರಡುವುದನ್ನು ತಡೆಯಲು ಸರ್ಕಾರದಿಂದ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದರೂ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿಲ್ಲ. ಇತ್ತೀಚೆಗೆ ಬರುವಂತಹ ಎಲ್ಲಾ ಪಾಸಿಟಿವ್ ಕೇಸ್ಗಳು ಕೂಡ ಸಂಪರ್ಕ ಗೊತ್ತಾಗುತ್ತಿಲ್ಲ. ಹೀಗಾಗಿ ಸರ್ಕಾರಕ್ಕೂ ಇದು ತಲೆನೋವಾಗಿದೆ.
ದಿನಕ್ಕೊಂದು ಹೊಸ ಹೊಸ ರೂಲ್ಸ್ನ ಸರ್ಕಾರ ಮಾಡುತ್ತಲೇ ಇದೆ. ಇದೀಗ ಮತ್ತೊಂದು ಹೊಸ ನಿಯಮವನ್ನು ಜಾರಿಗೆ ತಂದಿದೆ. ಹೋಮ್ ಕ್ವಾರಂಟೈನ್ ಮತ್ತು ಸಾಂಸ್ಥಿಕ ಕ್ವಾರಂಟೈನ್ ನಲ್ಲಿರುವವರು ಇನ್ನು ಮುಂದೆ ಬಿಎಂಟಿಸಿಯ ವಾಹನಗಳಲ್ಲಿ ಪ್ರಯಾಣಿಸುವುದು ಹಾಗೂ ಬಸ್ ನಿಲ್ದಾಣಗಳಲ್ಲಿ ಓಡಾಡುವಂತಿಲ್ಲ.
ಇನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ಎಲ್ಲ ಪ್ರಯಾಣಿಕರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗುತ್ತಿದೆ. ಹೀಗಾಗಿ ಅವರಿಗೆ ಮಾತ್ರ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಲಾಗಿದೆ. ವಿಮಾನ ನಿಲ್ದಾಣದಿಂದ ಬೇರೆಡೆಗೆ ಹೋಗುವವರಿಗೆ ವಾಯುವಜ್ರ ಸಾರಿಗೆಗಳಲ್ಲಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ.