ಬೆಂಗಳೂರು: ಕೊರೊನಾ ಸೋಂಕು ತಡೆಯುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಿದ್ದು ಭಾನುವಾರ ಲಾಕ್ಡೌನ್ ಜಾರಿ ಮಾಡಲಾಗುವುದು.
ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಬೆಂಗಳೂರಿನಲ್ಲಿ ಲಾಕ್ಡೌನ್ ಜಾರಿಯಾಗಲಿದೆ. ಅಗತ್ಯ ಸೇವೆ, ವಸ್ತುಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಚಟುವಟಿಕೆಗಳಿಗೆ ನಿರ್ಬಂಧವಿರುತ್ತದೆ.
ತರಕಾರಿ, ದಿನಸಿ ಅಂಗಡಿ, ಆಸ್ಪತ್ರೆ, ಔಷಧ, ಮಾಂಸದ ಅಂಗಡಿಗಳು ತೆರೆದಿರುತ್ತವೆ. ಹೋಟೆಲ್ ಗಳಲ್ಲಿ ಪಾರ್ಸಲ್ ಗೆ ಅವಕಾಶ ಇರುತ್ತದೆ. ಉಳಿದ ಚಟುವಟಿಕೆಗಳಿಗೆ ನಿರ್ಬಂಧ ಇರುತ್ತದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಈ ಕುರಿತು ಮಾಹಿತಿ ನೀಡಿದ್ದು, ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಬೆಂಗಳೂರಿನಲ್ಲಿ ಲಾಕ್ ಡೌನ್ ಜಾರಿಯಾಗಲಿದ್ದು ಈ ಸಂದರ್ಭದಲ್ಲಿ ಪ್ರತಿಯೊಬ್ಬರೂ ನಿಯಮಗಳನ್ನು ಪಾಲಿಸಬೇಕೆಂದು ತಿಳಿಸಿದ್ದಾರೆ.