ನವದೆಹಲಿ: ಕೊರೋನಾ ಕಾರಣದಿಂದಾಗಿ ಅಂತರರಾಷ್ಟ್ರೀಯ ನಾಗರಿಕ ವಿಮಾನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದು ಜುಲೈ 31 ರವರೆಗೆ ನಿರ್ಬಂಧ ಮುಂದುವರೆಸಲಾಗಿದೆ.
ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶಕರ ಕಚೇರಿಯಿಂದ ಈ ಬಗ್ಗೆ ಮಾಹಿತಿ ನೀಡಲಾಗಿದ್ದು ಅಗತ್ಯ ಸೇವೆಗಳಿಗಾಗಿ ಅನುಮತಿಯೊಂದಿಗೆ ಮಾತ್ರ ಅಂತರರಾಷ್ಟ್ರೀಯ ವಿಮಾನ ಯಾನಕ್ಕೆ ಅವಕಾಶವಿದೆ. ಇದನ್ನು ಹೊರತುಪಡಿಸಿ ಜುಲೈ 31 ರವರೆಗೆ ಅಂತರರಾಷ್ಟ್ರೀಯ ನಾಗರಿಕ ವಿಮಾನ ಯಾನಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಹೇಳಲಾಗಿದೆ.
ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಅಧ್ಯಕ್ಷ ಅರವಿಂದ ಸಿಂಗ್ ನೀಡಿರುವ ಮಾಹಿತಿಯಂತೆ ಸದ್ಯಕ್ಕೆ ಅಂತರರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ನಿರ್ಬಂಧವಿದ್ದು, ಸಂಚಾರ ಆರಂಭಿಸುವ ಮೊದಲು ಯುರೋಪ್ ರಾಷ್ಟ್ರಗಳು, ಕೊಲ್ಲಿ ರಾಷ್ಟ್ರಗಳು, ಅಮೆರಿಕ ಮೊದಲಾದ ದೇಶಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು. ಸಮಾಲೋಚನೆ ನಂತರವೇ ಅಂತರರಾಷ್ಟ್ರೀಯ ವಿಮಾನ ಸೇವೆಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.