ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿನಿಂದ ವೃದ್ಧರೊಬ್ಬರು ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.
ಶಂಕರಮಠದ ನಿವಾಸಿಯಾಗಿರುವ ಇವರು ಕೆಲದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಹೇಳಲಾಗಿದೆ.
60 ವರ್ಷದ ಈ ವ್ಯಕ್ತಿ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಕಾರಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ.