ಹಾವೇರಿ: ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಜಮೀನು ನೀಡುವ ರೈತರಿಗೆ 50: 50 ಅನುಪಾತದಲ್ಲಿ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ತಿಳಿಸಿದ್ದಾರೆ.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಂದ ಪಡೆದ ಜಮೀನನ್ನು ಪ್ರಾಧಿಕಾರದ ವತಿಯಿಂದ ನಿವೇಶನಗಳಾಗಿ ವಿನ್ಯಾಸಗೊಳಿಸಿದ ನಂತರದಲ್ಲಿ 50:50 ಅನುಪಾತದಲ್ಲಿ ರೈತರಿಗೆ ಹಂಚಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.
ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಾಣವಾಗುವ ಬಡಾವಣೆಗಳಲ್ಲಿ ಪತ್ರಕರ್ತರಿಗೆ ಶೇಕಡ 5 ರಷ್ಟು ನಿವೇಶನ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ. ನಗರ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಾಣವಾದ ಕಟ್ಟಡಗಳನ್ನು ಸಕ್ರಮಗೊಳಿಸಲಾಗುವುದು. ಈ ಮೂಲಕ ಕಂದಾಯವನ್ನು ಸಂಗ್ರಹಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.