ಉತ್ತರ ಪ್ರದೇಶದ ಗಾಜಿಯಾಬಾದ್ ಮೋದಿ ನಗರದ ಬಕರ್ವಾ ಗ್ರಾಮದ ಕ್ಯಾಂಡಲ್ ಕಾರ್ಖಾನೆಯಲ್ಲಿ ಭಾರೀ ಬೆಂಕಿ ಅವಘಡದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ.
ಸ್ಪೋಟದಿಂದ ಬೆಂಕಿ ತಗುಲಿದ್ದು ಕಾರ್ಖಾನೆಯ ಛಾವಣಿ, ಗೋಡೆಗಳು ಛಿದ್ರವಾಗಿವೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗಾಜಿಯಾಬಾದ್ ಜಿಲ್ಲಾಧಿಕಾರಿ ಅಜಯ್ ಶಂಕರ್ ಪಾಂಡೆ ತಿಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರು ಮತ್ತು ಮೃತಪಟ್ಟವರ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡುವಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅಲ್ಲದೆ ಘಟನೆಯ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದಾರೆ.