ತಿರುವನಂತಪುರಂ: ಕೇರಳ ಸರ್ಕಾರ ಮಾಸ್ಕ್ ಧರಿಸದವರಿಗೆ 10ಸಾವಿರ ರೂಪಾಯಿ ದಂಡ, 2 ವರ್ಷ ಜೈಲು ಶಿಕ್ಷೆ ವಿಧಿಸುವ ನಿಯಮ ರೂಪಿಸಿದೆ.
ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್, ಸಾಮಾಜಿಕ ಅಂತರ ಪಾಲನೆ ಕಡ್ಡಾಯಗೊಳಿಸಲಾಗಿದೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸೂಚನೆ ನೀಡಲಾಗಿದ್ದು ನಿಯಮ ಮೀರಿದವರಿಗೆ ಜೈಲು ಶಿಕ್ಷೆ, ದಂಡ ವಿಧಿಸುವ ನಿಯಮ ಜಾರಿಗೆ ತರಲಾಗಿದೆ.
ಒಂದು ವರ್ಷದ ಅವಧಿಗೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದೆ. ಕೇರಳ ಸಾಂಕ್ರಾಮಿಕ ಕಾಯಿಲೆಗಳ ನಿಯಂತ್ರಣ ಕಾನೂನು 2020ಕ್ಕೆ ತಿದ್ದುಪಡಿ ತರಲಾಗಿದ್ದು, ಮದುವೆಯಲ್ಲಿ 50 ಜನರಿಗೆ ಮಾತ್ರ ಅವಕಾಶವಿದ್ದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಅಲ್ಲದೇ, ಯಾವುದೇ ಸಭೆ, ಪ್ರತಿಭಟನೆಗಳಿಗೆ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ.