ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ. ಸೋಂಕು ನಿಯಂತ್ರಣಕ್ಕೆ ಸಾಹಸ ನಡೆಸುತ್ತಿದ್ದು ಈಗ ಆರ್ಥಿಕ ಮಿತವ್ಯಯದ ನೆಪದಲ್ಲಿ ಎಲ್ಲ ಇಲಾಖೆಗಳ ನೇಮಕಾತಿಗೆ ತಡೆ ಹಿಡಿಯಲಾಗಿದೆ.
ಹಣಕಾಸು ಇಲಾಖೆ ವತಿಯಿಂದ ಈ ಕುರಿತಾಗಿ ಆದೇಶ ಹೊರಡಿಸಿದ್ದು ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ತೀವ್ರ ನಿರಾಸೆ ಮೂಡಿಸಿದೆ. ರಾಜ್ಯದಲ್ಲಿ ಕೋರೋನಾ ಸೋಂಕು ತಡೆಯುವ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ. ಆರ್ಥಿಕ ಸ್ಥಿತಿಯನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡಲಾಗಿದೆ. ಇದಕ್ಕಾಗಿ ಸರ್ಕಾರ ಮಿತವ್ಯಯ ಪಾಲಿಸಲು 2020 – 21 ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು ಮತ್ತು ಬ್ಯಾಕ್ ಲಾಗ್ ಹುದ್ದೆಗಳು ಸೇರಿದಂತೆ ಎಲ್ಲ ನೇರ ನೇಮಕ ಹುದ್ದೆಗಳ ಭರ್ತಿಗೆ ಮುಂದಿನ ಆದೇಶದವರೆಗೆ ತಡೆಹಿಡಿಯಲಾಗಿದೆ ಎಂದು ಹಣಕಾಸು ಇಲಾಖೆಯಿಂದ ಮಾಹಿತಿ ನೀಡಲಾಗಿದೆ.
ಈಗಾಗಲೇ ಆರ್ಥಿಕ ಇಲಾಖೆಯ ಅನುಮತಿ ಪಡೆದು ನೇಮಕಾತಿಯ ವಿವಿಧ ಹಂತಗಳಲ್ಲಿರುವ ಹುದ್ದೆಗಳಿಗೂ ಸಹ ಈ ಆದೇಶ ಅನ್ವಯವಾಗುತ್ತದೆ ಎಂದು ಹೇಳಲಾಗಿದೆ.