ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊರೋನಾ ವಾರಿಯರ್ಸ್ ಗೆ ರಿಸ್ಕ್ ಭತ್ಯೆ ನೀಡಲು ಸರ್ಕಾರ ಚಿಂತನೆ ನಡೆಸಿದ್ದು ಎರಡು-ಮೂರು ದಿನಗಳಲ್ಲಿ ಈ ಬಗ್ಗೆ ನಿರ್ಧಾರವಾಗಲಿದೆ.
ಡಿ ಗ್ರೂಪ್ ನೌಕರರ ವೇತನವನ್ನು ದುಪ್ಪಟ್ಟು ಹೆಚ್ಚಿಸಲು ಚಿಂತನೆ ನಡೆಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಕೊರೋನಾ ನಿಯಂತ್ರಣಕ್ಕಾಗಿ ಮಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ರಿಸ್ಕ್ ಭತ್ಯೆ, ಚಿಕಿತ್ಸೆಯಲ್ಲಿ ಪಾಲ್ಗೊಳ್ಳುವ ಅಂತಿಮ ಹಂತದ ವೈದ್ಯಕೀಯ ವಿದ್ಯಾರ್ಥಿಗಳಿಗೆ 5 ವಿಶೇಷ ಅಂಕ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಆರೋಗ್ಯ ಇಲಾಖೆಯ ಡಿ ದರ್ಜೆ ನೌಕರರಿಗೆ ವೇತನ ದುಪ್ಪಟ್ಟು ಮಾಡುವ ಬಗ್ಗೆ ಚಿಂತನೆ ಇನ್ನು ಎರಡು-ಮೂರು ದಿನಗಳಲ್ಲಿ ಈ ಬಗ್ಗೆ ನಿರ್ಧಾರವಾಗುವ ಸ್ಪಷ್ಟತೆ ಸಿಗಲಿದೆ ಎಂದು ಸಚಿವರು ಹೇಳಿದ್ದಾರೆ.