ನವದೆಹಲಿ: ಮುಂಗಾರು ಹಂಗಾಮಿನಲ್ಲಿ ರೈತರಿಗೆ ಅವಶ್ಯಕವಾಗಿರುವಷ್ಟು ರಸಗೊಬ್ಬರ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.
ದೇಶದಲ್ಲಿ ರಸಗೊಬ್ಬರದ ಯಾವುದೇ ಕೊರತೆ ಇಲ್ಲ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಯೂರಿಯಾ ಅವಶ್ಯಕತೆ ಹೆಚ್ಚಾಗಿದೆ. ರೈತರ ಬೇಡಿಕೆಗೆ ತಕ್ಕಂತೆ ಯೂರಿಯಾ ಪೂರೈಕೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಲಾಕ್ಡೌನ್ ಸಂದರ್ಭದಲ್ಲಿ ರಸಗೊಬ್ಬರ ಮಾರಾಟ ಶೇಕಡ 83ರಷ್ಟು ಹೆಚ್ಚಾಗಿದ್ದು ಕೃಷಿಕ್ಷೇತ್ರದಲ್ಲಿ ದಾಖಲೆಯಾಗಿದೆ. ಎಂದು ಸಚಿವರು ಮಾಹಿತಿ ನೀಡಿದ್ದು, ಬಿತ್ತನೆಗೆ ಮೊದಲು ರೈತರಿಗೆ ರಸಗೊಬ್ಬರಗಳ ಲಭ್ಯತೆಯನ್ನು ಖಚಿತ ಪಡಿಸಿಕೊಳ್ಳಲು ಕೇಂದ್ರಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಈ ವರ್ಷ ದಾಖಲೆಯ ಪ್ರಮಾಣದಲ್ಲಿ ರಸಗೊಬ್ಬರ ಮಾರಾಟವಾಗಿದ್ದು, ಬೇಡಿಕೆಗೆ ತಕ್ಕಂತೆ ಪೂರೈಕೆಗೆ ಸರ್ಕಾರ ವ್ಯವಸ್ಥೆ ಮಾಡಿದೆ ಎಂದು ಹೇಳಿದ್ದಾರೆ.