ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಇನ್ನು ಮುಂದೆ ಎರಡು ದಿನ ಸಂಪೂರ್ಣ ಲಾಕ್ ಡೌನ್ ಜಾರಿಗೆ ಚಿಂತನೆ ನಡೆಸಲಾಗಿದೆ.
ಬೆಂಗಳೂರು ನಗರದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಮತ್ತು ಭಾನುವಾರ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆ ಇದೆ. ಈಗಾಗಲೇ ರಾಜ್ಯಾದ್ಯಂತ ಭಾನುವಾರ ಲಾಕ್ ಡೌನ್ ಮತ್ತು ಪ್ರತಿದಿನ ನೈಟ್ ಕರ್ಫ್ಯೂ ಜಾರಿಯಲ್ಲಿದೆ.
ರಾಜಧಾನಿಯಲ್ಲಿ ಮತ್ತೆ ಲಾಕ್ಡೌನ್ ಬ್ರಹ್ಮಾಸ್ತ್ರ ಪ್ರಯೋಗಿಸಲು ಚಿಂತನೆ ನಡೆದಿದ್ದು, ಎರಡು ದಿನಗಳ ಕಾಲ ಸಂಪೂರ್ಣ ಲಾಕ್ಡೌನ್ ಜಾರಿ ಮಾಡಲಾಗುವುದು ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಕೊರೋನಾ ಆರ್ಭಟಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮತ್ತಷ್ಟು ಕ್ರಮ ಕೈಗೊಂಡಿದ್ದು ಕೊರೋನಾ ತಡೆಯುವ ನಿಟ್ಟಿನಲ್ಲಿ ಲಾಕ್ ಡೌನ್ ಜಾರಿ ಮಾಡಲಾಗುವುದು. ಶನಿವಾರ ಕೂಡ ಲಾಕ್ಡೌನ್ ಮಾಡುವಂತೆ ಒತ್ತಾಯ ಕೇಳಿಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಚಿಂತನೆ ನಡೆದಿದೆ.
ಕಂದಾಯ ಸಚಿವ ಆರ್. ಅಶೋಕ್ ನೇತೃತ್ವದಲ್ಲಿ ಬಿಬಿಎಂಪಿ ಸದಸ್ಯರ ಸಭೆ ನಡೆಸಲಾಗಿದ್ದು ನಿನ್ನೆ ನಡೆದ ಸಭೆಯಲ್ಲಿ ಎಲ್ಲಾ ಕಾರ್ಪೋರೇಟರುಗಳು ಭಾನುವಾರದಂತೆ ಶನಿವಾರವೂ ಲಾಕ್ ಡೌನ್ ಜಾರಿ ಮಾಡುವಂತೆ ಸಲಹೆ ನೀಡಿದ್ದಾರೆ. ಈ ಕುರಿತು ಸಿಎಂ, ಸಚಿವರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.