ಬೆಂಗಳೂರು: ಅನಾರೋಗ್ಯದ ಕಾರಣ ಹಿರಿಯ ನಟಿ ಜಯಂತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಅನಾರೋಗ್ಯ ಉಂಟಾಗಿದ್ದು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.
ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿದೆ. ಕೊರೋನಾ ಪರೀಕ್ಷೆ ನಡೆಸಲಾಗಿದ್ದು ನೆಗೆಟಿವ್ ವರದಿ ಬಂದಿದೆ. ಚಿಕಿತ್ಸೆ ನಂತರ ಜಯಂತಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.