ಬೆಂಗಳೂರು: ರಾಜ್ಯದ ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಡಗಿನಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಗುಡ್ಡಗಾಡು ಪ್ರದೇಶದಲ್ಲಿ ವಿಪರೀತ ಮಳೆಯಾಗುತ್ತಿದ್ದು ಇನ್ನು ಮಳೆ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಟ್ಟದ ಪ್ರದೇಶದಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹೇಳಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ.