ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ಭಾನುವಾರದ ಜೊತೆಗೆ ಶನಿವಾರವೂ ಕೂಡ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಎರಡು ದಿನ ಲಾಕ್ಡೌನ್ ಜಾರಿ ಮಾಡುವುದರಿಂದ ಸೋಂಕು ನಿಯಂತ್ರಣಕ್ಕೆ ಅನುಕೂಲವಾಗುತ್ತದೆ ಎನ್ನುವ ಅಭಿಪ್ರಾಯ ಕೇಳಿ ಬಂದಿದ್ದು, ಬಿಬಿಎಂಪಿಯ ಬಹುತೇಕ ಸದಸ್ಯರು ಶನಿವಾರವೂ ಲಾಕ್ಡೌನ್ ಜಾರಿಗೆ ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಅಲ್ಲದೆ, ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಶನಿವಾರ ಲಾಕ್ ಡೌನ್ ಜಾರಿ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ. ಬೆಂಗಳೂರಿಗೆ ಹೊರಗಿನ ಪ್ರವೇಶ ನಿರ್ಬಂಧಿಸಿ 2 ದಿನ ಸಂಪೂರ್ಣ ಲಾಕ್ ಜಾರಿ ಮಾಡುವ ಕುರಿತು ಇಂದು ನಡೆಯಲಿರುವ ಮಹತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎನ್ನಲಾಗಿದೆ.
ಭಾನುವಾರ ಮಾತ್ರ ಲಾಕ್ ಡೌನ್ ಜಾರಿ ಮಾಡಿ ಉಳಿದಂತೆ ಸೋಂಕು ಕಾಣಿಸಿಕೊಂಡ ಪ್ರದೇಶದಲ್ಲಿ ಕಠಿಣ ಸೀಲ್ ಮಾಡಲಾಗುವುದು. ಶನಿವಾರ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆ ಇಲ್ಲವೆನ್ನಲಾಗಿದೆ.