ಕಲಬುರ್ಗಿ ಜಿಲ್ಲೆ ಜೇವರ್ಗಿ ಕ್ಷೇತ್ರದ ಶಾಸಕ, ಮಾಜಿ ಸಿಎಂ ದಿ. ಧರಂಸಿಂಗ್ ಅವರ ಪುತ್ರ ಡಾ. ಅಜಯ್ ಸಿಂಗ್ ಅವರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ.
ವಿಧಾನಸಭೆಯ ಕಾಂಗ್ರೆಸ್ ಪಕ್ಷದ ಮುಖ್ಯಸಚೇತಕರಾಗಿರುವ ಅಜಯ್ ಸಿಂಗ್ ಅವರೇ ಈ ಕುರಿತಾಗಿ ಮಾಹಿತಿ ನೀಡಿದ್ದಾರೆ. ನನಗೆ ಕೊರೋನಾ ಪಾಸಿಟಿವ್ ಬಂದಿದೆ. ಯಾವುದೇ ರೋಗ ಲಕ್ಷಣ ಕಾಣಿಸಿಕೊಂಡಿಲ್ಲ ಎಂದು ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಭಾಗಿಯಾಗಿದ್ದ ಅಜಯ್ ಸಿಂಗ್ ಅವರು ಮುನ್ನೆಚ್ಚರಿಕೆ ಕೈಗೊಂಡಿದ್ದು ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.