ದಾವಣಗೆರೆ: ಕೇಂದ್ರ ಪುರಸ್ಕ್ರತ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದ್ದು, ಈ ಯೋಜನೆಯ ಲಾಭ ಪಡೆದುಕೊಳ್ಳಲು ಬೀದಿ ವ್ಯಾಪಾರಿಗಳು ದಾವಣಗೆರೆ ಮಹಾನಗರಪಾಲಿಕೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಯೋಜನೆಯಡಿ ಬೀದಿ ವ್ಯಾಪಾರಸ್ಥರಿಗೆ ಕೈಗೆಟುಕುವ ದರದಲ್ಲಿ ಬ್ಯಾಂಕ್ಗಳ ಮೂಲಕ 10,000 ರೂ. ವರೆಗೆ ಸಾಲ ಸೌಲಭ್ಯ ನೀಡಲಾಗುವುದು. ನಿಯಮಿತವಾಗಿ ಸಾಲ ಮರುಪಾವತಿ ಮಾಡಿದವರಿಗೆ ಶೇ.7 ರ ಬಡ್ಡಿ ಸಹಾಯಧನ ನೀಡಲಾಗುವುದು. ಸಮೀಕ್ಷೆಯಲ್ಲಿ ಗುರುತಿಸಲ್ಪಟ್ಟು, ಗುರುತಿನ ಕಾರ್ಡ್ ಹೊಂದಿರುವ ಬೀದಿ ವ್ಯಾಪಾರಸ್ಥರು ಅರ್ಹ ಫಲಾನುಭವಿಗಳಾಗಿದ್ದು, ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಜು.30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಫಲಾನುಭವಿಗಳು ಪಾಲಿಕೆಯಿಂದ ಬೀದಿಬದಿ ವ್ಯಾಪಾರದ ಮಾರಾಟ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಮುಂತಾದ ದಾಖಲೆಗಳೊಂದಿಗೆ ಪಾಲಿಕೆಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ವೆಬ್ಸೈಟ್ www.davanagerecity.mrc.gov.in ನಲ್ಲಿ ಅಥವಾ ಕಚೇರಿ ಸಮಯದಲ್ಲಿ ಎಎಸ್ಜೆಎಸ್ಆರ್ವೈ ಶಾಖೆಗೆ ಭೇಟಿಯಾಗಬಹುದೆಂದು ಮಹಾನಗರಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.