ರಾಜ್ಯದಲ್ಲಿ ಕೊರೊನಾ ಸೋಂಕು ದಿನೇ ದಿನೇ ವ್ಯಾಪಕವಾಗುತ್ತಿದ್ದು, ಕಳೆದ ಕೆಲ ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನ ಕೈಗೊಂಡಿದೆ.
ಕೊರೊನಾ ಸೋಂಕು ಸಿಬ್ಬಂದಿಗೆ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಮುಂದಾಗಿರುವ ಶಿಕ್ಷಣ ಇಲಾಖೆ, ಎಲ್ಲ ಶನಿವಾರಗಳಂದು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.
ಆಗಸ್ಟ್ 8ರ ವರೆಗೆ ಈ ಆದೇಶ ಜಾರಿಯಲ್ಲಿರಲಿದ್ದು, ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಎಲ್ಲ ಶಿಕ್ಷಕ ಹಾಗೂ ಸಿಬ್ಬಂದಿಗೆ ರಜಾ ನಿಯಮ ಅನ್ವಯವಾಗಲಿದೆ.