ಬೆಂಗಳೂರು: ಮನೆಯಿಂದ ಹೊರಗೆ ಹೆಜ್ಜೆ ಇಡುವ ಮುನ್ನ ಎಚ್ಚರಿಕೆಯಿಂದ ಇರಿ. ಅನಗತ್ಯವಾಗಿ ಮನೆಯಿಂದ ಹೊರಗೆ ಬರಬೇಡಿ.
ಲಾಕ್ ಡೌನ್ ಹಿನ್ನಲೆಯಲ್ಲಿ 33 ಗಂಟೆಗಳ ಕಾಲ ಪೊಲೀಸರು ಟೈಟ್ ಸೆಕ್ಯೂರಿಟಿ ಕೈಗೊಂಡಿದ್ದಾರೆ. ಅಂತರ್ ಜಿಲ್ಲೆ ಮತ್ತು ಅಂತರಾಜ್ಯ ಪ್ರಯಾಣಕ್ಕೆ ನಿರ್ಬಂಧ ಹೇರಲಾಗಿದೆ. ಬಸ್, ಆಟೋ, ಕ್ಯಾಬ್ ಸಂಚರಿಸಲ್ಲ. ಅಗತ್ಯ ಸೇವೆ ಹೊರತಾದ ವಾಹನಗಳ ಸಂಚಾರಕ್ಕೆ ನಿರ್ಬಂಧವಿದೆ. ದೂರದ ಊರುಗಳಿಗೆ ಹೋಗಬೇಕಾದವರು ಪ್ರಯಾಣವನ್ನು ಮುಂದೂಡುವುದು ಒಳ್ಳೆಯದು.
ಅಂದ ಹಾಗೆ. ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ರಾತ್ರಿಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಸಂಪೂರ್ಣ ಲಾಕ್ಡೌನ್ ಜಾರಿಯಲ್ಲಿರುತ್ತದೆ. ಪ್ರತಿದಿನ ರಾತ್ರಿ ಕರ್ಫ್ಯೂ ಮತ್ತು ಪ್ರತಿ ಭಾನುವಾರ ಲಾಕ್ ಡೌನ್ ಇರುವುದರಿಂದ ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆವರೆಗೆ ಕರ್ನಾಟಕ ಕಂಪ್ಲೀಟ್ ಬಂದ್ ಆಗಲಿದೆ.
ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದು, ಅನಗತ್ಯವಾಗಿ ತಿರುಗಾಡುವವರಿಗೆ ಬಿಸಿ ಮುಟ್ಟಿಸಲಿದ್ದಾರೆ. ವಾಹನ ವಶಕ್ಕೆ ಪಡೆಯುವ ಜೊತೆಗೆ ದಂಡ ವಿಧಿಸಲು ಮುಂದಾಗಿದ್ದಾರೆ. ಹಾಗಾಗಿ, ಅನಗತ್ಯವಾಗಿ ಮನೆಯಿಂದ ಹೊರಬರಬಾರದು ಎಂದು ಹೇಳಲಾಗಿದೆ.