![](https://kannadadunia.com/wp-content/uploads/2020/06/corona-virus_1588753431.jpg)
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಬ್ಲಾಸ್ಟ್ ಆಗಿದ್ದು, ಇವತ್ತು ಒಂದೇ ದಿನ ಬರೋಬ್ಬರಿ 70 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 613 ಕ್ಕೆ ಏರಿಕೆಯಾಗಿದೆ.
ಬೆಂಗಳೂರಲ್ಲಿ ಇಂದು 23 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸಾವಿನ ಪ್ರಮಾಣ ಶೇಕಡ 1.69 ರಷ್ಟು ಇದ್ದು, ಬೆಂಗಳೂರಲ್ಲಿ ಸಾವಿನ ಪ್ರಮಾಣ ಶೇಕಡ 1.35 ರಷ್ಟು ಇದೆ.
ರಾಜ್ಯದಲ್ಲಿ ಇಂದು ಬರೋಬ್ಬರಿ 2799 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಬೆಂಗಳೂರು ನಗರ ಜಿಲ್ಲೆಯಲ್ಲಿ 1533 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಬೆಂಗಳೂರಲ್ಲಿ ಇಂದು 404 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 36,217 ಕ್ಕೆ ಏರಿಕೆಯಾಗಿದೆ.