ನವದೆಹಲಿ: ರಾಜಸ್ತಾನ ಕಾಂಗ್ರೆಸ್ ಸರ್ಕಾರ ಪತನದತ್ತ ಸಾಗಿದಂತಿದೆ. ಸಿಎಂ ಅಶೋಕ್ ಗೆಹ್ಲೋಟ್ ವಿರುದ್ಧ ಡಿಸಿಎಂ ಸಚಿನ್ ಪೈಲೆಟ್ ನೇತೃತ್ವದಲ್ಲಿ 25 ಶಾಸಕರು ಬಂಡಾಯವೆದ್ದಿದ್ದಾರೆ.
ರಾಜಸ್ತಾನದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯ ಸಾರಿರುವ ಡಿಸಿಎಂ ಸಚಿನ್ ಪೈಲೆಟ್ ತಮ್ಮ ಬೆಂಬಲಿಗ ಶಾಸಕರೊಂದಿಗೆ ದೆಹಲಿಯಲ್ಲಿ ತಂಗಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿಗೆ ಸಮಯ ನಿಗದಿ ಮಾಡಿಕೊಂಡಿರುವ ಸಚಿನ್ ಪೈಲೆಟ್ ಇದಕ್ಕಿಂತ ಮೊದಲೇ ಇತ್ತೀಚೆಗೆ ಬಿಜೆಪಿ ಸೇರಿದ ಮಧ್ಯಪ್ರದೇಶದ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಭೇಟಿಯಾಗಿದ್ದಾರೆ.
ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಭೇಟಿಯಾದ ಸಚಿನ್ ಪೈಲೆಟ್ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ರಾಹುಲ್ ಭೇಟಿಯ ವೇಳೆ ತಮ್ಮ ಬೇಡಿಕೆ ಈಡೇರದಿದ್ದರೆ, ಸಚಿನ್ ಪೈಲೆಟ್ ಬಿಜೆಪಿಯತ್ತ ಹೆಜ್ಜೆ ಹಾಕಲಿದ್ದಾರೆ ಎನ್ನಲಾಗಿದೆ.