ಬೆಂಗಳೂರು: ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ಡೌನ್ ಘೋಷಣೆ ಮಾಡಲಾಗಿದೆ.
ಅದೇ ರೀತಿ ಸೋಂಕು ಹೆಚ್ಚಾಗಿರುವ 12 ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಡಳಿತ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ದಕ್ಷಿಣ ಕನ್ನಡ, ಕಲಬುರಗಿ, ಬಳ್ಳಾರಿ, ಉಡುಪಿ, ಯಾದಗಿರಿ, ಧಾರವಾಡ ಸೇರಿದಂತೆ 12 ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾದ ಕಾರಣ ಲಾಕ್ ಡೌನ್ ವಿಸ್ತರಣೆ ಮಾಡುವ ಕುರಿತಾಗಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.