ವಿಶ್ವದೆಲ್ಲೆಡೆ ತಲ್ಲಣ ಮೂಡಿಸಿರುವ ಕೊರೊನಾ ಸೋಂಕು ತಡೆ ಲಸಿಕೆ ಕಂಡು ಹಿಡಿಯುವಲ್ಲಿ ರಷ್ಯಾ ಯಶಸ್ವಿಯಾಗಿದೆ. ಮಾನವ ಕ್ಲಿನಿಕಲ್ ಪ್ರಯೋಗಗಳನ್ನು ಯಶಸ್ವಿಯಾಗಿ ನಡೆಸಿರುವ ರಷ್ಯಾ ಕೊರೋನಾ ಲಸಿಕೆ ಕಂಡು ಹಿಡಿದಿದೆ. ಇದು ವಿಶ್ವದ ಮೊದಲ ಕೋವಿಡ್-19 ಲಸಿಕೆಯಾಗಿದೆ.
ಸೆಚೆನೊವೊ ಫಸ್ಟ್ ಮಾಸ್ಕೋ ಸ್ಟೇಟ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ಸ್ವಯಂಸೇವಕರ ಮೇಲೆ ವಿಶ್ವದ ಮೊದಲ ಕೊರೋನಾ ವೈರಸ್ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳು ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ವೈದ್ಯಕೀಯ ಸಂಸ್ಥೆಯ ನಿರ್ದೇಶಕರು ವಾಡಿಮ್ ತಾರಸೊವ್ ತಿಳಿಸಿದ್ದಾರೆ.
ಜುಲೈ 15 ಮತ್ತು 20 ರಂದು ಕೊರೋನಾ ಸೋಂಕಿನಿಂದ ಗುಣಮುಖರಾದ ವ್ಯಕ್ತಿಗಳನ್ನು ಬಿಡುಗಡೆ ಮಾಡಲಾಗುವುದು. ಜೂನ್ 18 ರಿಂದ ಆರಂಭವಾದ ಮಾನವ ಕ್ಲಿನಿಕಲ್ ಪ್ರಯೋಗ ಯಶಸ್ವಿಯಾಗಿದೆ ಎಂದು ತಿಳಿಸಿದ್ದಾರೆ.