ಬೆಂಗಳೂರು: ಕೊನೆ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಆಗಸ್ಟ್ ನಲ್ಲಿ ತರಗತಿ ನಡೆಸಲಾಗುವುದು. ಹಾಜರಾತಿ ಕಡ್ಡಾಯವಲ್ಲ, ವಿದ್ಯಾರ್ಥಿಗಳು ಬಯಸಿದಲ್ಲಿ ತರಗತಿಗೆ ಹಾಜರಾಗಬಹುದು ಎಂದು ಹೇಳಲಾಗಿದೆ.
ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳು ಪರೀಕ್ಷೆಗೆ ಮೊದಲು ತರಗತಿ ಬಯಸಿದ್ದಲ್ಲಿ ಉನ್ನತ ಶಿಕ್ಷಣ ಇಲಾಖೆಯಿಂದ ವ್ಯವಸ್ಥೆ ಕಲ್ಪಿಸಲಾಗಿದೆ.
ಸರ್ಕಾರದ ವತಿಯಿಂದ ಸೆಪ್ಟೆಂಬರ್ ಅಂತ್ಯದೊಳಗೆ ಅಂತಿಮ ಸೆಮಿಸ್ಟರ್ ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಎಲ್ಲ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಲಾಗಿದೆ.
ಆಗಸ್ಟ್ ನಲ್ಲಿ ಆಸಕ್ತ ವಿದ್ಯಾರ್ಥಿಗಳಿಗೆ ತರಗತಿ ನಡೆಸಲಾಗುವುದು. ಹಾಜರಾತಿ ಕಡ್ಡಾಯವಾಗಿರುವುದಿಲ್ಲ. ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳು ಇಲಾಖೆ ನಿಗದಿಪಡಿಸಿದ ದಿನಾಂಕಗಳಂದು ತರಗತಿಗೆ ಬರಬಹುದು. ಸದ್ಯವೇ ಈ ಕುರಿತ ಮಾರ್ಗಸೂಚಿ ಪ್ರಕಟಿಸಲಾಗುವುದು. ವಿದ್ಯಾರ್ಥಿಗಳ ಉದ್ಯೋಗಾವಕಾಶಗಳಿಗೆ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.