ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಇದನ್ನು ತಡೆಯಲು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ಡೌನ್ ಜಾರಿ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸ್ವಾಗತಿಸಿದ್ದಾರೆ.
ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ರಾಜ್ಯವನ್ನು ಕಂಪ್ಲೀಟ್ ಲಾಕ್ ಡೌನ್ ಮಾಡಬೇಕೆಂದು ಅವರು ಹೇಳಿದ್ದಾರೆ.
ರಾಜ್ಯಾದ್ಯಂತ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸಬೇಕೆಂದು ದೇವೇಗೌಡರು ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಲಾಕ್ಡೌನ್ ಮಾಡುತ್ತಿರುವುದು ಸ್ವಾಗತಾರ್ಹವಾಗಿದೆ. ಇದರೊಂದಿಗೆ ರಾಜ್ಯಾದ್ಯಂತ ಲಾಕ್ಡೌನ್ ಜಾರಿ ಮಾಡಬೇಕೆಂದು ಹೇಳಿದ್ದಾರೆ.