ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಒಂದೇ ದಿನ 1315 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಒಟ್ಟು ಸೋಂಕಿತರ ಸಂಖ್ಯೆ 19,702 ಕ್ಕೆ ಏರಿಕೆಯಾಗಿದೆ.
ಇಂದು 283 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 4328 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬರೋಬ್ಬರಿ 15,052 ಸಕ್ರಿಯ ಪ್ರಕರಣಗಳಿದ್ದು, ಇವತ್ತು ಒಂದೇ ದಿನ 47 ಜನ ಮೃತಪಟ್ಟಿದ್ದಾರೆ. ಇದುವರೆಗೆ ಬೆಂಗಳೂರಿನಲ್ಲಿ 321 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.