ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 2496 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 44,077 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿಂದು 87 ಜನ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 1267 ಜನ ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸಂಖ್ಯೆ 20,969 ಕ್ಕೆ ಏರಿಕೆಯಾಗಿದೆ. ಬೆಂಗಳೂರಲ್ಲಿ ಇವತ್ತು ಒಂದೇ ದಿನ 56 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 377 ಏರಿಕೆಯಾಗಿದೆ.