ಬೆಂಗಳೂರು: ರಾಜ್ಯದಲ್ಲಿ ಇಂದು 2496 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 44,097 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ 1142 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೆ 17,390 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಬರೋಬ್ಬರಿ 25,839 ಸಕ್ರಿಯ ಪ್ರಕರಣಗಳು ಇದ್ದು 540 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 82 ಮಂದಿ ಮೃತಪಟ್ಟಿದ್ದು, ಇದುವರೆಗೆ 842 ಮಂದಿ ಸಾವನ್ನಪ್ಪಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಇವತ್ತು 1267 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 20,969 ಕ್ಕೆ ಏರಿಕೆಯಾಗಿದೆ. ಇಂದು 664 ಜನ ಬಿಡುಗಡೆಯಾಗಿದ್ದು ಇದುವರೆಗೆ 4992 ಜನ ಬಿಡುಗಡೆಯಾಗಿದ್ದಾರೆ. 15,599 ಸಕ್ರಿಯ ಪ್ರಕರಣಗಳು ಇವೆ. ಇವತ್ತು ಒಂದೇ ದಿನ 56 ಮಂದಿ ಮೃತಪಟ್ಟಿದ್ದು, ಇದುವರೆಗೆ ಬೆಂಗಳೂರಿನಲ್ಲಿ 377 ಜನ ಮೃತಪಟ್ಟಿದ್ದಾರೆ.