ಬೆಂಗಳೂರು: ಡಿ-ಗ್ರೂಪ್ ನೌಕರರಿಗೆ 10 ಸಾವಿರ ರೂ. ಪ್ರೋತ್ಸಾಹ ಧನ ನೀಡಲು ಸರ್ಕಾರ ಆದೇಶ ಹೊರಡಿಸಿದೆ.
ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಕೋವಿಡ್ ಆಸ್ಪತ್ರೆ, ಕೋವಿಡ್ ನಿಗಾ ಕೇಂದ್ರ ಮತ್ತು ಚಿಕಿತ್ಸಾ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಿ ಗ್ರೂಪ್ ನೌಕರರಿಗೆ 10 ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗುವುದು.
ನೌಕರರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕನಿಷ್ಠ ಆರು ತಿಂಗಳ ಅವಧಿಗೆ ಅನ್ವಯವಾಗುವಂತೆ 10 ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಮಾಸಿಕ ವೇತನದ ಜೊತೆಗೆ 10 ಸಾವಿರ ರೂಪಾಯಿ ಹೆಚ್ಚುವರಿ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಹೇಳಲಾಗಿದೆ.