ನವದೆಹಲಿ: ಕೊರೋನಾ ತಡೆ ಲಸಿಕೆ ಅಭಿವೃದ್ಧಿಪಡಿಸುವಲ್ಲಿ ವಿಶ್ವದ ಅನೇಕ ದೇಶಗಳ ವಿಜ್ಞಾನಿಗಳು ಶ್ರಮಿಸುತ್ತಿದ್ದಾರೆ.
ಲಸಿಕೆ ಕಂಡು ಹಿಡಿಯುವಲ್ಲಿ ಭಾರತ ಮುಂಚೂಣಿಯಲ್ಲಿದ್ದು, ಜಾಗತಿಕ ಮಟ್ಟದಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಆಗಸ್ಟ್ 15 ರೊಳಗೆ ಕೊರೋನಾ ತಡೆ ಲಸಿಕೆ ಬಿಡುಗಡೆಯಾದರೂ ಅಚ್ಚರಿಪಡಬೇಕಿಲ್ಲ ಎಂದು ಹೇಳಲಾಗಿದೆ.
ಕೊರೋನಾ ತಡೆ ಲಸಿಕೆ ಅಭಿವೃದ್ಧಿ ಕಾರ್ಯದಲ್ಲಿ ಮುಂಚೂಣಿಯಲ್ಲಿರುವ ಭಾರತ ವಿಶ್ವದಲ್ಲಿ ಪ್ರಮುಖ ಪಾತ್ರವ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.
ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಮತ್ತು ಅಹಮದಾಬಾದ್ ಮೂಲದ ಕಾಡಿಲಾ ಸಂಸ್ಥೆಯ ಲಸಿಕೆ ಪ್ರಿಕ್ಲಿನಿಕಲ್ ಪ್ರಯೋಗದಲ್ಲಿ ಸಕಾರಾತ್ಮಕ ಫಲಿತಾಂಶವನ್ನು ನೀಡಿವೆ.
ಮಾನವ ಕ್ಲಿನಿಕಲ್ ಪ್ರಯೋಗಕ್ಕೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಅನುಮತಿ ನೀಡಿದ್ದು ಈ ನಿಟ್ಟಿನಲ್ಲಿ ಪ್ರಯೋಗ ನಡೆದಿವೆ. ವಿಶ್ವದ ಅನೇಕ ದೇಶಗಳಲ್ಲಿ ಕೊರೊನಾ ಲಸಿಕೆಯ ವಿವಿಧ ಹಂತದ ಪ್ರಯೋಗಗಳು ಯಶಸ್ವಿಯಾಗಿ ಬಿಡುಗಡೆ ಹಾದಿಯಲ್ಲಿವೆ.