ಉಪನ್ಯಾಸಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಬಹುಕಾಲದ ಬಳಿಕ ಕೊನೆಗೂ ರಾಜ್ಯ ಸರ್ಕಾರ ಬಂಪರ್ ಸುದ್ದಿಯನ್ನು ನೀಡಿದೆ. ಶೀಘ್ರದಲ್ಲೇ ಪಿಯು ಉಪನ್ಯಾಸಕರ ನೇಮಕಕ್ಕೆ ಕೌನ್ಸೆಲಿಂಗ್ ನಡೆಯಲಿದೆ.
ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಈ ವಿಷಯ ತಿಳಿಸಿದ್ದು, ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಪಿಯು ಉಪನ್ಯಾಸಕರ ನೇಮಕಕ್ಕೆ ಕೌನ್ಸೆಲಿಂಗ್ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
ಕಳೆದ ಆರು ವರ್ಷಗಳಿಂದ ಪಿಯು ಉಪನ್ಯಾಸಕರ ನೇಮಕಾತಿ ತೂಗುಯ್ಯಾಲೆಯಲ್ಲಿದ್ದು, ಈ ಹಿಂದೆ ನಿಗದಿಯಾಗಿದ್ದ ಕೌನ್ಸೆಲಿಂಗ್ ರದ್ದುಗೊಂಡಿತ್ತು. ಕೊನೆಗೂ ಇದಕ್ಕೆ ಕಾಲ ಕೂಡಿ ಬಂದಿದೆ.