ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಸಂಪೂರ್ಣ ಲಾಕ್ಡೌನ್ ಜಾರಿ ಮಾಡಲಾಗಿದೆ. ಜುಲೈ 23ರ ಬೆಳಗ್ಗೆ 5 ಗಂಟೆಯವರೆಗೂ ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿಯಲ್ಲಿರುತ್ತದೆ.
ಬೆಳಗ್ಗೆ 8 ಗಂಟೆಯಿಂದ 11 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಲಾಗಿದೆ. ದಿನಸಿ, ಹಣ್ಣು-ತರಕಾರಿ, ಮಾಂಸದ ಅಂಗಡಿಗಳು ತೆರೆದಿರುತ್ತವೆ. ಆರೋಗ್ಯ ಸೇವೆ ಮೆಡಿಕಲ್ ಶಾಪ್ ಗಳು ಓಪನ್ ಇರುತ್ತವೆ. ಉಳಿದಂತೆ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಇಂದಿನಿಂದ ಲಾಕ್ ಡೌನ್ ಜಾರಿ ಮಾಡಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಗಡಿಗಳನ್ನು ಸೀಲ್ ಡೌನ್ ಮಾಡಲಾಗಿದ್ದು, ಹೊರ ಜಿಲ್ಲೆಗಳ ವಾಹನಗಳಿಗೆ ಗಡಿ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಅದೇ ರೀತಿ ಅನೇಕ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗಿದೆ.