alex Certify ಬಿಗ್ ನ್ಯೂಸ್: ಅಂಚೆ ಮತದಾನ ಕುರಿತಾಗಿ ನಿರ್ಧಾರ ಬದಲಿಸಿದ ಚುನಾವಣಾ ಆಯೋಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಅಂಚೆ ಮತದಾನ ಕುರಿತಾಗಿ ನಿರ್ಧಾರ ಬದಲಿಸಿದ ಚುನಾವಣಾ ಆಯೋಗ

ನವದೆಹಲಿ: 65 ವರ್ಷ ಮೇಲ್ಪಟ್ಟವರಿಗೆ ಅಂಚೆ ಮತದಾನಕ್ಕೆ ಅವಕಾಶ ನೀಡುವುದಾಗಿ ಹೇಳಿದ್ದ ಚುನಾವಣಾ ನಿರ್ಧಾರ ಬದಲಿಸಿದೆ.

65 ವರ್ಷ ಮೇಲ್ಪಟ್ಟವರಿಗೆ ಅಂಚೆ ಮತದಾನದ ಸೌಲಭ್ಯ ನೀಡದಿರಲು ನಿರ್ಧರಿಸಿದೆ. ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮತ್ತು ಇತರೆ ಉಪಚುನಾವಣೆಗಳಲ್ಲಿ 65 ವರ್ಷ ಮೇಲ್ಪಟ್ಟವರಿಗೆ ಅಂಚೆ ಮತದಾನ ಮಾಡಲು ಅವಕಾಶ ಇರುವುದಿಲ್ಲ.

ಕೊರೋನಾ ನಿಯಮಗಳು ಮತ್ತು ಮಾನವ ಸಂಪನ್ಮೂಲ, ಸಮರ್ಪಕ ವ್ಯವಸ್ಥೆಗಳು ಇಲ್ಲದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ 65 ವರ್ಷ ಮೇಲ್ಪಟ್ಟವರಿಗೆ ಮತದಾನಕ್ಕೆ ಅವಕಾಶ ನೀಡದಿರಲು ತೀರ್ಮಾನಿಸಿದೆ.

80 ವರ್ಷ ದಾಟಿದ ಹಿರಿಯರು, ವಿಕಲಚೇತನರು, ಕೊರೋನಾ ಸೋಂಕಿತರು ಅಂಚೆ ಮತದಾನ ಮಾಡಬಹುದು ಎಂದು ಹೇಳಲಾಗಿದೆ. ಈ ಮೊದಲು 65 ವರ್ಷ ಮೇಲ್ಪಟ್ಟವರಿಗೆ ಅಂಚೆ ಮತದಾನಕ್ಕೆ ಅವಕಾಶ ನೀಡುವುದಾಗಿ ಹೇಳಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...