ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದು ಒಂದು ವರ್ಷ ಆಗುತ್ತಿರುವ ಹಿನ್ನೆಲೆಯಲ್ಲಿ ಸಂಪುಟ ಪುನಾರಚನೆ ಮಾಡುವ ಚಿಂತನೆ ನಡೆದಿದೆ ಎಂದು ಹೇಳಲಾಗಿದೆ.
ಜುಲೈ 26 ಕ್ಕೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಒಂದು ವರ್ಷವಾಗಲಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ಪುನಾರಚನೆ ಬಗ್ಗೆ ಚಿಂತನೆ ನಡೆದಿದೆ. ಖಾಲಿ ಉಳಿದ 6 ಸ್ಥಾನ ಭರ್ತಿ ಮಾಡುವ ಜೊತೆಗೆ ಸಂಪುಟದಿಂದ ಕೆಲವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಪಕ್ಷದ ವಲಯದಲ್ಲಿ ಹೊಸಬರಿಗೆ ಅವಕಾಶ ನೀಡಬೇಕೆಂಬ ಒತ್ತಾಯ ಕೇಳಿಬಂದಿದ್ದು, ಶೀಘ್ರವೇ. ಸಚಿವ ಸಂಪುಟ ಪುನಾರಚನೆ ಮಾಡುವ ಸಾಧ್ಯತೆ ಇದೆ. ಎಂಟಿಬಿ ನಾಗರಾಜ್, ಉಮೇಶ್ ಕತ್ತಿ ಸೇರಿ ಹಲವರು ಸಂಪುಟಕ್ಕೆ ಸೇರ್ಪಡೆ ಆಗುವ ಸಾಧ್ಯತೆ ಇದೆ. ಹಿರಿಯ ಸಚಿವರಲ್ಲಿ ಕೆಲವರನ್ನು ಕೈಬಿಟ್ಟು ಅವರದೇ ಸಮುದಾಯದ ಬೇರೆಯವರಿಗೆ ಅವಕಾಶ ಮಾಡಿಕೊಡಬೇಕೆಂಬ ಒತ್ತಡ ಕೇಳಿಬಂದಿದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಕೊರೋನಾ ಸಂಕಷ್ಟ ಎದುರಾಗಿರುವುದರಿಂದ ಸಚಿವ ಸಂಪುಟ ಪುನಾರಚನೆ ಕಾರ್ಯರೂಪಕ್ಕೆ ಬರುವುದು ಅನುಮಾನ ಎನ್ನಲಾಗಿದೆ.