ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಂಶಿಪೋರಾದಲ್ಲಿ ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.
ಪೊಲೀಸರು ಮತ್ತು ಭದ್ರತಾ ಪಡೆಗಳಿಂದ ಜಂಟಿ ಕಾರ್ಯಾಚರಣೆ ನಡೆಸಲಾಗಿದ್ದು, ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಹತ್ಯೆಗೈಯಲಾಗಿದೆ. ಶುಕ್ರವಾರ ಕುಲ್ಗಾಂ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿ ಜೈಶ್-ಇ-ಮೊಹಮ್ಮದ್ ಸಂಘಟನೆಯ ಕಮಾಂಡರ್ ಸೇರಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿತ್ತು.
ಶನಿವಾರ ಬೆಳ್ಳಂಬೆಳಿಗ್ಗೆ ನಡೆದ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಸದೆಬಡಿಯಲಾಗಿದೆ. ಈ ಪ್ರದೇಶದಲ್ಲಿರುವ ಮಾಹಿತಿ ಪಡೆದ ಭದ್ರತಾ ಪಡೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಕಾರ್ಯಾಚರಣೆ ವೇಳೆ ಗುಂಡಿನ ಚಕಮಕಿ ನಡೆದಿದ್ದು ನಾಲ್ವರು ಉಗ್ರರು ಹತರಾಗಿದ್ದಾರೆ ಎಂದು ಗೊತ್ತಾಗಿದೆ. ಕಾರ್ಯಾಚರಣೆ ಮುಂದುವರೆದಿದೆ.