ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿದೆ. ಶನಿವಾರ ಒಂದೇ ದಿನ 114 ಪ್ರಕರಣಗಳು ಬೆಳಕಿಗೆ ಬಂದಿದ್ದು, ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದರ ಮಧ್ಯೆ ಕೊರೊನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಮುಂದಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಶಿವಮೊಗ್ಗ ನಗರದ 85000 ಮನೆಗಳ ನಾಲ್ಕು ಲಕ್ಷ ಜನರಿಗೆ ರೋಗ ನಿರೋಧಕ ಶಕ್ತಿ ವೃದ್ಧಿಸುವ ಆಯುರ್ವೇದ ಕಿಟ್ ನ್ನು ಉಚಿತವಾಗಿ ವಿತರಿಸಲು ನಿರ್ಧರಿಸಿದ್ದಾರೆ.
ಇದಕ್ಕಾಗಿ ಕೊರೊನಾ ಸುರಕ್ಷಾ ಪಡೆ ರಚಿಸಲಾಗಿದ್ದು, ಆಧಾರ್ ಕಾರ್ಡ್ ಹೊಂದಿದವರಿಗೆ ಮಾತ್ರ ಆಯುರ್ವೇದ ಔಷಧಿ ಕಿಟ್ ವಿತರಿಸಲಾಗುತ್ತದೆ ಎಂದು ತಿಳಿಸಲಾಗಿದೆ. ಮೊದಲ ಹಂತದಲ್ಲಿ 1 ಲಕ್ಷ ಕಿಟ್ ಪೂರೈಸಲಿದ್ದು, ನಂತರ ಹಂತಹಂತವಾಗಿ ಉಳಿದ ಮೂರು ಲಕ್ಷ ಕಿಟ್ ಗಳನ್ನು ವಿತರಿಸಲಾಗುವುದು.